ಗೃಹ ಲಕ್ಷ್ಮೀ ಯೋಜನೆ : ಕಾಂಗ್ರೆಸ್ ಸರಕಾರದ 5 ಗ್ಯಾರಂಟಿ ಯೋಜನೆಗಳ ಪೈಕಿ ಗೃಹ ಲಕ್ಷ್ಮೀ ಯೋಜನೆಯು ಕೂಡಾ ಒಂದಾಗಿದ್ದು, ಈ ಯೋಜನೆ ಅಡಿಯಲ್ಲಿ ಪ್ರತಿ ಮನೆ ಯಜಮಾನಿಗೆ ರೂ 2000 /- ಪ್ರತಿ ತಿಂಗಳು ನೀಡಲಾಗುತ್ತದೆ. ಇದೀಗ ಈ ಯೋಜನೆಯಲ್ಲಿ ಮಹತ್ವದ ಬದಲಾವಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ವರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರ ಮೂಲಕ ಪಾವತಿ ಆಗುತ್ತಿತ್ತು. ಆದರೆ ಈಗ ತಾಲೂಕು ಪಂಚಾಯತಿಯಿಂದಲೇ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪಲಿದೆ.ಈ ವಿಚಾರದ ಬಗ್ಗೆ ಈಗ ಇಲಾಖೆ ಹಂತದಲ್ಲಿ ಚರ್ಚೆ ನಡೆಯುತ್ತಿದ್ದು, ಆದಷ್ಟು ಬೇಗ ಅಧಿಕೃತ ಆದೇಶ ಪ್ರಕಟ ಆಗುವ ಸಾಧ್ಯತೆ ಇದೆ. ಇನ್ನು ಗೃಹ ಲಕ್ಷ್ಮೀ ಯೋಜನೆಯ ಹಣ ತಮ್ಮ ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವ ಫಲಾನುಭವಿಗಳು ಮೊದಲು ತಮ್ಮ ಬ್ಯಾಂಕ ಖಾತೆಗೆ ಆಧಾರ ಲಿಂಕ್ ಮತ್ತು ಬ್ಯಾಂಕ್ ಖಾತೆಗೆ ಆಧಾರ ಸೀಡಿಂಗ್ ಮಾಡಿಸಬೇಕು. ಜೊತೆಗೆ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ.